ಬೆಂಗಳೂರು,ಆ 01 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಆ. 14 ರವರೆಗೆ ವಿಸ್ತರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಯಿತು.
ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.ಕೊಲೆ ಆರೋಪಿ ನಟ ದರ್ಶನ್ ಸೇರಿ ಒಟ್ಟು 17 ಮಂದಿಗೆ ಮತ್ತೆ 14 ದಿನಗಳ ಕಾಲ ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.