ನವದೆಹಲಿ : ರಷ್ಯಾ ಆಕ್ರಮಿತ ಉಕ್ರೇನ್ನಿಂದ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಳ್ಳಲು ನಡೆಸಲಾಗುತ್ತಿರುವ ಕಾರ್ಯಾಚರಣೆಗೆ ಕೈಜೋಡಿಸುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
‘ಆಪರೇಷನ್ ಗಂಗಾ’ ಕಾರ್ಯಾಚರಣೆಯ ಮೂಲಕ ಯುದ್ದಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಮತ್ತು ಭಾರತೀಯ ನಾಗರಿಕರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರವು ಪ್ರಾರಂಭಿಸಿದೆ. ‘ಆಪರೇಷನ್ ಗಂಗಾ’ ಮಿಷನ್‌ನ ಭಾಗವಾಗಿ ಏರ್ ಇಂಡಿಯಾ ವಿಶೇಷ ವಿಮಾನಗಳನ್ನು ನಿರ್ವಹಿಸುತ್ತಿದೆ..
ಯುದ್ದಪೀಡಿತ ಉಕ್ರೇನ್‌ನಲ್ಲಿರುವ ಭಾರತೀಯರನ್ನು ನೆರೆ ದೇಶಗಳಾದ ಪೋಲೆಂಡ್, ರುಮೇನಿಯಾ, ಸ್ಲೊವಾಕಿಯಾ, ಹಂಗೆರಿ ಮೂಲಕ ಸ್ವದೇಶಕ್ಕೆ ಕರೆತರಲಾಗುತ್ತಿದೆ. ಉಕ್ರೇನ್‌ನಲ್ಲಿ ಸಿಲುಕಿರುವವರನ್ನು ಕರೆತರುವುದಕ್ಕಾಗಿ ಭಾರತದ ದೇಶೀಯ ವಿಮಾನಯಾನ ಸಂಸ್ಥೆಗಳು ರುಮೇನಿಯಾ, ಹಂಗೆರಿಗೆ ವಿಮಾನಗಳನ್ನು ಕಳುಹಿಸುತ್ತಿವೆ. ಇಲ್ಲಿಯವರೆಗೆ ಏಳು ವಿಮಾನಗಳ ಮೂಲಕ ಭಾರತೀಯರನ್ನು ಕರೆದುಕೊಂಡು ಬರಲಾಗಿದೆ.
ಉಕ್ರೇನ್‌ನಲ್ಲಿರುವ ಭಾರತೀಯರನ್ನುಕರೆತರಲು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ರುಮೇನಿಯಾದ ಬುಕಾರೆಸ್ಟ್ ಹಾಗೂ ಹಂಗೆರಿಯ ಬುಡಾಪೆಸ್ಟ್‌ಗಳಿಂದ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿವೆ
ಅಲ್ಲದೆ ಇಂಡಿಗೊ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ಗಳು ರುಮೇನಿಯಾ, ಹಂಗೆರಿಗಳಿಗೆ ವಿಶೇಷ ವಿಮಾನಗಳನ್ನು ಕಳುಹಿಸಲಿವೆ. ಭಾರತೀಯ ವಾಯುಪಡೆಯು ಇವತ್ತಿನಿಂದ ‘ಆಪರೇಷನ್ ಗಂಗಾ’ ಭಾಗವಾಗಿ ಹಲವಾರು C-17 ವಿಮಾನಗಳನ್ನು ನಿಯೋಜಿಸುವ ಸಾಧ್ಯತೆಯಿದೆ.
7 Comments
meditation music
coffee relaxing jazz
Si su esposo eliminó el historial de chat, también puede usar herramientas de recuperación de datos para recuperar los mensajes eliminados. A continuación se muestran algunas herramientas de recuperación de datos de uso común:
Pingback: italian driver license
Pingback: คาสิโนออนไลน์ lsm99
Pingback: amanita mushroom gummies effects
Pingback: พอต