ಉಡುಪಿ ಏ.21 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ವಿವಿಧೆಡೆ ಭೇಟಿ ನೀಡಿ ಮತಯಾಚಿಸಿದರು.
ಕಾಪು ಕ್ಷೇತ್ರದ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ, ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಾಲಯದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಅಲ್ಲದೇ ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯ, ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಾಲಯ, ಕಟಪಾಡಿಯ ಕೋಟೆ ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕಾಪು ಕ್ಷೇತ್ರದ ಕುಕ್ಕೆಹಳ್ಳಿಯ ಓಜೋನ್ ಕ್ಯಾಷ್ಯು ಇಂಡಸ್ಟ್ರಿಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತಯಾಚನೆ ಮಾಡಿದರು.
ಪೆರ್ಡೂರು ಸಮೀಪದ ಬುಕ್ಕೆ ಗುಡ್ಡೆಯಲ್ಲಿರುವ ಸಿಂಧೂ ಕ್ಯಾಷ್ಯ ಇಂಡಸ್ಟ್ರೀಸ್ ನಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಜರಿದ್ದರು.