ಉತ್ತರಕಾಶಿ, ನ. 29 : ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದ ಒಳಗೆ ಕಳೆದ 17 ದಿನಗಳಿಂದ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯ ಪೂರ್ಣಗೊಂಡಿದೆ.
ಸಿಲ್ಕ್ಯಾರಾ ಕೊಳವೆಯೊಳಗೆ ಸ್ಟ್ರೆಚರ್ ಬಳಸಿ ರಾತ್ರಿ 8ಕ್ಕೆ ಮೊದಲ ಕಾರ್ಮಿಕನನ್ನು ಸುರಕ್ಷಿತವಾಗಿ ಹೊರತರುವಲ್ಲಿ ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ ಸಫಲವಾಯಿತು. ನಂತರ ಒಬ್ಬರ ಹಿಂದೊಬ್ಬರಂತೆ ಕಾರ್ಮಿಕರು ಹೊರಬಂದರು. ಸ್ಥಳಕ್ಕೆ ಭೇಟಿ ನೀಡಿದ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕಾರ್ಮಿಕರ ಆರೋಗ್ಯ ವಿಚಾರಿಸಿ ಸಂಭ್ರಮಿಸಿದರು.
ಸುರಕ್ಷಿತವಾಗಿ ಹೊರ ಬಂದ ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ಸುರಂಗದೊಳಗೆ ಹೋದ ಅಂಬುಲೆನ್ಸ್ಗಳು ಕೊಳವೆಯಿಂದ ಹೊರಬರುತ್ತಿದ್ದ ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊತ್ತೊಯ್ದವು.