ಉತ್ತರ ಪ್ರದೇಶ, ಜ 19 : ಎಲ್ ಪಿ ಜಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭಾರಿ ಸ್ಫೋಟ ಸಂಭವಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.
ಎಲ್ ಪಿ ಜಿ ಸಿಲಿಂಡರ್ಗಳನ್ನು ತುಂಬಿದ್ದ ಟ್ರಕ್ ಲಕ್ನೋದಿಂದ ಗೊಂಡಾಗೆ ಬರುತ್ತಿದ್ದಾಗ ಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಒಂದರಂತೆ ಅನೇಕ ಸಿಲಿಂಡರ್ಗಳು ಸ್ಫೋಟಗೊಳ್ಳುವ ದೃಶ್ಯ ಕಂಡುಬಂದಿದೆ ಎಂದು ವರದಿಯಾಗಿದೆ.
ಟ್ರಕ್ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.