ಉಳ್ಳಾಲ, ಜ. 24 : ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ಮಂಗಳಾವಾರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಬಾಗಲಕೋಟೆ ನಿವಾಸಿ ಸುರೇಶ್ (30) ಗುರುತಿಸಲಾಗಿದೆ.
ಮಂಗಳೂರಿನ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ಸುರೇಶ್ ಅವರು ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.