ಮಂಗಳೂರು, ಏ. 05 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನಗರದ ಎಸ್ಸಿಡಿಸಿಸಿ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
ಬ್ಯಾಂಕ್ ಅಭಿವೃದ್ಧಿಯ ಮುಂಚೂಣಿಯ ಲ್ಲಿದ್ದು, ತನ್ನ 110 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದಿದೆ ಎಂದರು.
ಎಸ್ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7221.37ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ 6485.12 ಕೋಟಿ ಮುಂಗಡವನ್ನು ನೀಡಿ, ವ್ಯವಹಾರವನ್ನು ನಡೆಸಿದೆ. ಸತತ 29 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇ.100 ಸಾಧನೆ ಮಾಡಿದೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ ರಾಜಾರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ ಬಿ., ಯಂ ವಾದಿರಾಜ ಶೆಟ್ಟಿ, ಎಸ್ ರಾಜು ಪೂಜಾರಿ, ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಹರೀಶ್ಚಂದ್ರ, ಕೆ. ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಕುಶಾಲಪ್ಪ ಗೌಡ, ಎಸ್.ಎನ್. ಮನ್ಮಥ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ ಉಪಸ್ಥಿತರಿದ್ದರು.