ಬೆಂಗಳೂರು, ಜು 12: ಕನ್ನಡ ನಿರೂಪಕಿ ಅಪರ್ಣಾ ವಸ್ತಾರೆ ಅವರು ಜು. 11 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿ ದ್ದಾರೆ.
ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಅಪರ್ಣ ಅವರು ಬಳಲುತ್ತಿದ್ದರು. ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೆಂಗಳೂರು ದೂರದರ್ಶನದಲ್ಲಿ ನಿರೂಪಕಿಯಾಗಿದ್ದ ಅಪರ್ಣಾ ಅವರು ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.
ನಟಿ ಅಪರ್ಣಾ ಮುಕ್ತ-ಮುಕ್ತ, ಮೂಡಲ ಮನೆ ಸೇರಿ ಹಲವು ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದರು.