ಬೆಂಗಳೂರು, ಫೆ. 25: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ (ಸಿಜೆ) ನಿಲಯ್ ವಿಪಿನ್ಚಂದ್ರ ಅಂಜಾರಿಯ ಅವರು ರವಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು