ಶಿವಮೊಗ್ಗ, ಜ. 12 : ಕರ್ನಾಟಕ ಕಾಂಗ್ರೆಸ್ ಸರ್ಕಾರದ 5ನೇ ಉಚಿತ ಗ್ಯಾರಂಟಿ ಯೋಜನೆಯಾದ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತಾಡಿ, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದು, ಬೇರೆ ಬೆರೆ ಜಿಲ್ಲೆಗಳಿಂದ ಲಕ್ಷಾಂತರ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.