ಕಾಸರಗೋಡು, ಜ. 10 : ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಿನೋದ್ ಕುಮಾರ್ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು,ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ.
ಪುಲ್ಲೂರು ನಿವಾಸಿಯಾಗಿದ್ದ ವಿನೋದ್ ಕುಮಾರ್ ಅವರು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು,
ಬಳಿಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.