ಕುಂದಾಪುರ, ಫೆ 05 : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ನೇಮಕವಾದ ಕುಂದಾಪುರದ ಬಿ. ಕಿಶೋರ್ ಕುಮಾರ್ ಅವರಿಗೆ ಶನಿವಾರ ಕುಂದಾಪುರ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತಾಡಿ, ಪಕ್ಷವನ್ನು ಬೂತ್ ಮಟ್ಟದಿಂದ ಇನ್ನಷ್ಟು ಬಲಪಡಿಸುವ ಜತೆಗೆ ಶಕ್ತಿ ತುಂಬುವ ಕಾರ್ಯ ಜಿಲ್ಲಾಧ್ಯಕ್ಷರಿಂದ ಆಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿ, ಇದು ಬಯಸದೇ ಬಂದ ಭಾಗ್ಯ. ಕಾರ್ಯಕರ್ತರೊಂದಿಗಿನ ನಿರಂತರ ಸಂಬಂಧ ಈ ಹಂತಕ್ಕೆ ಬೆಳೆಸಿದೆ. ಈ ಜವಾಬ್ದಾರಿ ಸಿಗುವಲ್ಲಿ ನೆರವಾದ ಎಲ್ಲ ಹಿರಿಯ, ಕಿರಿಯರೆಲ್ಲರಿಗೂ ಋಣಿ ಎಂದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ. ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷರು,ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ,ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಪುರಸಭೆ ಸದಸ್ಯರು, ಪಕ್ಷದ ಪ್ರಮುಖರು, ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.