ಕೊಣಾಜೆ, ಜ. 14 : ನರಿಂಗಾನ ಕಂಬಳೋತ್ಸವ ವು ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಶನಿವಾರ ಉದ್ಘಾಟನೆಗೊಂಡಿತು.
ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರು ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಮಾತನಾಡಿ, ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನರಿಂಗಾನದ ವಿಸ್ತಾರವಾದ ಜಾಗದಲ್ಲಿ ಸರ್ಕಾರಿ ಕಂಬಳ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ, ತುಳುನಾಡಿನ ಕೃಷಿ ಹಾಗೂ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಕಂಬಳ ಈ ನಾಡಿನ ಹೆಮ್ಮೆಯ ಕಲೆಯಾಗಿ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ವಿಧಾನಸಭೆ ಅಧ್ಯಕ್ಷರಾದ ಯು.ಟಿ.ಖಾದರ್, ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ವೆಂಕಪ್ಪ ಕಾಜವ ಮಿತ್ತಕೋಡಿ, ಮುಖಂಡರಾದ ಗುಣಪಾಲ್ ಕಡಂಬ, ಧಾರ್ಮಿಕ ಕ್ಷೇತ್ರದ ಮುಂದಾಳುಗಳಾದ ಪ್ರಮೋದ್ ರೈ, ಗುಣಕರ ಆಳ್ವ, ಕುರ್ನಾಡು ಗುತ್ತುವಿನ ಸುಧಾಕರ ಶೆಟ್ಟಿ, ಅರ್ಚಕರಾದ ರಾಘವೇಂದ್ರ ಆಚಾರ್, ಕಿನ್ಯ ಗುತ್ತು ನಾರಾಯಣ ಶೆಟ್ಟಿ, , ಮನಮೋಹನ ಕೊಂಡೆ ಮೊದಲಾದವರು ಉಪಸ್ಥಿತರಿದ್ದರು.