ಕೊಲಂಬೋ, ಜ. 26 : ಕೊಲಂಬೊ-ಕಟುನಾಯಕೆ ಎಕ್ಸ್ಪ್ರೆಸ್ವೇಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶ್ರೀಲಂಕಾದ ರಾಜ್ಯ ಸಚಿವ ಸನತ್ ನಿಶಾಂತ (48) ಮತ್ತು ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಗುರುವಾರ ಮುಂಜಾನೆ ಶ್ರೀಲಂಕಾದ ರಾಜ್ಯ ಸಚಿವ ಸನತ್ ನಿಶಾಂತ ಅವರು ಸಂಚರಿಸುತ್ತಿದ್ದ ವಾಹನವು, ಕಂಟೈನರ್ ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸಚಿವರು, ಸಚಿವರ ಪೊಲೀಸ್ ಅಧಿಕಾರಿ , ಹಾಗೂ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಸಚಿವರು, ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ವಾಹನದ ಚಾಲಕ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
1 Comment
Pingback: jazz cafe