ಚಿಕ್ಕಬಳ್ಳಾಪುರ, ನ.03: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೊಳ್ಳೆಗಳಿಂದ ಹರಡುವ ಮಾರಕ ಝಿಕಾ ವೈರಸ್ ಪತ್ತೆಯಾದ ಕಾರಣ ಕರ್ನಾಟಕ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಹಾಗೆನೇ ರಾಜ್ಯದ 68 ವಿವಿಧ ಸ್ಥಳಗಳಲ್ಲಿ ಸೊಳ್ಳೆಗಳ ದೇಹದಲ್ಲಿ ಝಿಕಾ ವೈರಸ್ ಇರುವುದನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಅಂತೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಆರು ಸ್ಥಳಗಳಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಝೀಕಾ ವೈರಸ್ ಪತ್ತೆಯಾಗಿದೆ. ಆದರೆ ಜನರಿಗೆ ಹರಡಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಝಿಕಾ ವೈರಸ್ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು, ಇದರ ರೋಗದ ಲಕ್ಷಣಗಳು ಜ್ವರ, ತಲೆನೋವು, ಕೀಲು ನೋವು, ಕೆಂಪು ಕಣ್ಣುಗಳು ಮತ್ತು ಸ್ನಾಯು ನೋವು.
2 Comments
Pingback: cozy coffee
Pingback: deep sleep