ನವದೆಹಲಿ,ಜ. 23:ಸೋಮವಾರ ತಡರಾತ್ರಿ ಚೀನಾದ ದಕ್ಷಿಣ ಕ್ಸಿನ್ಜಿಯಾಂಗ್ ನ ಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಯಾವುದೇ ಸಾವು-ನೋವುಗಳು ಮತ್ತು ಆಸ್ತಿಪಾಸ್ತಿಗಳು ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ರಾಷ್ಟ್ರ ರಾಜಧಾನಿ ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ .











