ಮಂಗಳೂರು, ಜು.03: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಚಲನಚಿತ್ರ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.
ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ಧರ್ಮ ದೈವ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲೀಸ್, ಸುರತ್ಕಲ್ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲ ದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿ ಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಚಿತ್ರ ತೆರೆಕಾಣಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ಚೇತನ್ ರೈ ಮಾಣಿ, ರಮೇಶ್ ರೈ ಕುಕ್ಕುವಳ್ಳಿ, ಅರುಣ್ ರೈ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.