ನವದೆಹಲಿ, ಡಿ. 29 : ಜೆಡಿಯು (JDU) ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಸಿಎಂ ನಿತೀಶ್ ಕುಮಾರ್ ಶುಕ್ರವಾರ ನೇಮಕಗೊಂಡಿದ್ದಾರೆ.
ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ರಾಜೀವ್ ರಂಜನ್ ಸಿಂಗ್, ಲಾಲನ್ ಸಿಂಗ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ರಾಜೀವ್ ರಂಜನ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಯು ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ.