ಮಂಗಳೂರು, ಆ. 25: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿ ಸುತ್ತಿದ್ದೇನೆ. ತುಳು ಭಾಷೆಗೆ ಅಧಿಕೃತ ಸ್ಥಾನಮಾ ನ ನೀಡುವ ಬಗ್ಗೆ ಶ್ರಮಿಸುವುದಾಗಿ ಸ್ಪೀಕರ್ ಯು.ಟಿ. ಖಾದರ್ ತುಳುನಾಡ ಜಾನಪದ ಉಚ್ಚಯ 2024 ಕಾರ್ಯಕ್ರಮದಲ್ಲಿ ಹೇಳಿದರು.
ಕುದ್ದುಲ ರಂಗರಾವ್ ಪುರಭವನದಲ್ಲಿ ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ವತಿಯಿಂದ ಶನಿವಾರ ಜರಗಿದ ತುಳುನಾಡ ‘ಜಾನಪದ ಉಚ್ಚಯ 2024’ರ ಸಮಾರೋಪದಲ್ಲಿ ಹಿರಿಯ ನಟ ನಿರ್ಮಾಪಕ ತೋನ್ಸೆ ವಿಜಯ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮಾತನಾಡಿ, ವಿಧಾನಸಭೆಯಲ್ಲಿ ತುಳು ಭಾಷೆಯ ಬಗ್ಗೆ ಚರ್ಚೆ ನಡೆದಿದೆ. ಲೋಕ ಸಭೆಯಲ್ಲೂ ತುಳು ಭಾಷೆಯ ಬಗ್ಗೆ ಚರ್ಚೆ ನಡೆಯಬೇಕು. ರಾಜಕೀಯ ಮರೆತು ಎಲ್ಲರೂ ಒಂದಾಗಿ ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಬೇಕು ಎಂದರು.
ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂ ಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಡಾ| ಮೂಡಂಬೈಲು ರವಿ ಶೆಟ್ಟಿ ಕತಾರ್, ಶಶಿ ಕಿರಣ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ,ರವೀಂದ್ರನಾಥ ಎಂ. ಭಂಡಾರಿ, ಕೆ.ಡಿ. ಶೆಟ್ಟಿ, ಕಿಶನ್ ಶೆಟ್ಟಿ , ಗೌರವಾಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ, ಧರ್ಮಪಾಲ ಯು. ದೇವಾಡಿಗ ಮುಂಬಯಿ ಮೊದಲಾದವರು ಉಪಸ್ಥಿತರಿದ್ದರು.