ಹೈದರಾಬಾದ್, ಡಿ. 08 : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಗುರುವಾರ ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿದಂತೆ ವಿವಿಧ ಸಚಿವರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.