ನೆಲ್ಯಾಡಿ, ಜು. 26 : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ಜು.25, ಮಂಗಳವಾರ ನಡೆದಿದೆ.
ಮೃತರನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.
ಇಕ್ಬಾಲ್ ಅವರು ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಕ್ಬಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2 Comments
Pingback: Packman vape carts Peachy Nerdz where to buy
Pingback: magic mushroom types