ಪಡುಬಿದ್ರಿ,ಸೆ.11 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿಕ ಶಾಖೆಯು ಸೋಮವಾರ ಉದ್ಘಾಟನೆಗೊಂಡಿತು.
ನೂತನ ಕಟ್ಟಡದ ಉದ್ಘಾಟನೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎಸ್.ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು.
ನಂತರ ಮಾತನಾಡಿದ ರಾಜೇಂದ್ರ ಕುಮಾರ್ ಅವರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಸಹಕಾರಿ ಸಂಸ್ಥೆಗಳು ಜನರೊಂದಿಗೆ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಾ ಜನರಿಗೆ ಹತ್ತಿರವಾಗುತ್ತಿದ್ದು, ಸಹಕಾರಿ ಬ್ಯಾಂಕ್ ಇಂದು ಜನರಿಗಾಗಿ ವಿಸ್ತಾರಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಪಡುಬಿದ್ರಿ ಸೊಸೈಟಿಯ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೊಸೈಟಿಯು ರೈತರ ನೆರವಿಗಾಗಿ ರಸಗೊಬ್ಬರ ಖರೀದಿಗೆ ಶೇ.15 ರಿಯಾಯಿತಿ ನೀಡುವ ಮೂಲಕ ಪ್ರಥಮ ಸ್ಥಾನಿಯಾಗಿದೆ. ಪಡುಬಿದ್ರಿ ಸೊಸೈಟಿಯ ಎಲ್ಲ 5 ಶಾಖೆಗಳು ಹವಾನಿಯಂತ್ರಿಕ ವ್ಯವಸ್ಥೆ ಹೊಂದಿವೆ ಎಂದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಸ್ಥೆಯ ಬಗ್ಗೆ ಹೆಮ್ಮೆಯಾಗುತ್ತದೆ. ಭಾರತದ ಬಲಿಷ್ಠ ಹಣಕಾಸು ಸಂಸ್ಥೆಯಾಗಿ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪಲಿಮಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಡುಪ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಗುತ್ತಿನಾ ಶೇಖರ ಶೆಟ್ಟಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕ ಶರಣ್ ಕುಮಾರ್ ಮಟ್ಟು, ಕಟ್ಟಡದ ಗುತ್ತಿಗೆದಾರರರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ತಾ.ಪಂ. ಮಾಜಿ ಸದಸ್ಯರಾದ ಲಕ್ಷ್ಮಣ್ ಶೆಟ್ಟಿ, ದಿನೇಶ್ ಕೋಟ್ಯಾನ್, ಡಾ.ಪ್ರಭಾ ನಂಬಿಯಾರ್, ಹಾಜಿ ಎಂ.ಪಿ.ಶೇಖಬ್ಬ ಪಲಿಮಾರು, ಉದ್ಯಮಿ ದಿನೇಶ್ ಪ್ರಭು, ನಿರ್ದೇಶಕರಾದ ಶಿವರಾಮ ಶೆಟ್ಟಿ, ಮಾಧವ ಆಚಾರ್ಯ, ರಾಜಾರಾಮ್ ರಾವ್, ವೈ.ಜಿ. ರಸೂಲ್, ಸ್ಪ್ಯಾನಿ ಕ್ವಾಡ್ರಸ್, ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ಯಶವಂತ ಪಿ.ಬಿ, ಸುಚರಿತಾ ಎಲ್. ಅಮೀನ್, ಕುಸುಮಾ ಎಂ. ಕರ್ಕೇರ, ಕಾಂಚನಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್, ಸಿಇಒ ನಿಶ್ಮಿತಾ ಪಿ.ಎಚ್, ಶಾಖಾ ಪ್ರಬಂಧಕಿ ಶೋಭಾ ಪುತ್ರನ್ ಉಪಸ್ಥಿತರಿದ್ದರು.