ಪುತ್ತೂರು, ಡಿ. 04 : ಮಾಡನ್ನೂರು ಗ್ರಾಮದ ಕಾವು ಬಂಗ್ಲೆ ಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ಶಂಕರ ಮಾಡನ್ನೂರು (40 ) ಎಂದು ಗುರುತಿಸಲಾಗಿದೆ.
ಸಾಲಬಾಧೆಯಿಂದಾಗಿ ಜೀವನದಲ್ಲಿ ಜಿಗುಪ್ಸೆಗೊಂಡು, ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸಂಪ್ಯ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ.