ಪುತ್ತೂರು, ಏ. 18: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು.
ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ, ಬ್ರಹ್ಮಶ್ರೀ ವಾಸುದೇವ ತಂತ್ರಿ, ಶ್ರೀಧರ ತಂತ್ರಿ, ಗುರುಪುಸಾದ್ ಅವರ ಉಪಸ್ಥಿತಿಯೊಂದಿಗೆ ಕಾರ್ಯಕ್ರಮಗಳು ನಡೆದವು. ಬ್ರಹ್ಮರಥೋತ್ಸವದಲ್ಲಿ ದೇವಳದ ಆಡಳಿತಾಧಿಕಾರಿ ಹನುಮರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಶಾಸಕ ಅಶೋಕ್ ಕುಮಾರ್ ರೈ ಅವರ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು.
ರಥೋತ್ಸವದ ಮೊದಲು ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಭಕ್ತಾದಿಗಳು ಬ್ರಹ್ಮರಥೋತ್ಸವ ದಲ್ಲಿ ಪಾಲ್ಗೊಂಡಿದ್ದರು.
ಬ್ರಹ್ಮರಥೋತ್ಸವದ ಭಕ್ತಿ ಸಂಭ್ರಮದ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ದೇವಳದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಉತ್ಸವ ಸಮಿತಿಯ ಅಧ್ಯಕ್ಷ ಬನ್ನೂರು, ವ್ಯವಸ್ಮಾಪನಾ ಸಮಿತಿ ಮಾಜಿ ಸದಸ್ಯ ಕರುಣಾಕರ ರೈ ನಿರಂಜನ್ ರೈ, ಉಮೇಶ್ ಆಚಾರಿ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಸಹಿತ ಹಲವಾರು ಮಂದಿ ಪ್ರಮುಖರು ಉಪಸ್ಥಿತರಿದ್ದರು