ಅಯೋಧ್ಯೆ, ಜ.22 : ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಳ್ಳಿ ರಾಮಮಂದಿರ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದರು.ಗೋವಿಂದ್ ದೇವ್ ಗಿರಿ ಜಿ ಮಹಾರಾಜ್ ಸ್ವಾಮೀಜಿ ಮೋದಿಗೆ ಶಾಲು ಹೊದಿಸಿ ಗೌರವಿಸಿದರು.
ಅಯೋಧ್ಯೆಯಲ್ಲಿ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿತು. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು.