ಬೆಂಗಳೂರು,, ಫೆ. 13 : 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆ. 17ರಂದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಸಿದ್ದರಾಮಯ್ಯ ಅವರು ಮಾತಾಡಿ ಬಸವಣ್ಣನವರ ಭಾವಚಿತ್ರದಲ್ಲಿ ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ ಎಂದು ನಮೂದಿಸಲು ಸೂಚನೆ ನೀಡಲಾಗಿದೆ ಎಂದರು.