ಬಂಟ್ವಾಳ, ಜೂ 06 : ಮನೆಯೊಂದರ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಕಾರ್ಮಿಕರೋರ್ವರು ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ( 45) ಎಂದು ಗುರುತಿಸಲಾಗಿದೆ.
ಪ್ರಕಾಶ್ ಅವರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.