ಬಂಟ್ವಾಳ, ಏ. 23 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತಯಾಚನೆ ಮಾಡಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರು ಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, , ವಗ್ಗ ಮೊದಲಾದ ಪ್ರದೇಶಗಳ ಮತದಾರ, ಕಾರ್ಯಕರ್ತರ ಬಳಿಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಪ್ರಚಾರ ಸಮಿತಿಯ ಪಿಯೂಷ್ ರೋಡ್ರಿಗಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಲವೀನಾ ಮೋರಸ್, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರಾ, ಉಸ್ತುವಾರಿ ಶಶಿಧರ್ ಪ್ರಭು, ಉಪಾಧ್ಯಕ್ಷ ರಮೇಶ್, ದಯಾನಂದ ಗೌಡ, ಪ್ರಕಾಶ್ ಜೈನ್, ವಿಕ್ಟರ್, ದಿನೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಕೃಷ್ಣಪ್ಪ ಕುಲಾಲ್, ವಿಶ್ವನಾಥ ಶೆಟ್ಟಿ, ದೇವಪ್ಪ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.