ಮೂಡುಬಿದ್ರೆ, ಏ.20 : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದರು.
ಅಭ್ಯರ್ಥಿಯಾದ ಚೌಟ ಅವರು ಏ.17ರಂದು ಮೂಲ್ಕಿ- ಮೂಡುಬಿದ್ರೆಯಲ್ಲಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದರು.
ಮೂಡುಬಿದ್ರೆ ಕಿನ್ನಿಗೋಳಿಯಲ್ಲಿ ಸ್ಥಳೀಯ ಮುಖಂಡ ಈಶ್ವರ್ ಕಟೀಲ್ ನೇತೃತ್ವದಲ್ಲಿ ಯುವಕರು, ಮಹಿಳೆಯರು, ಸ್ಥಳೀಯ ಕಾರ್ಯಕರ್ತರು ಸಾಥ್ ನೀಡಿದರು.