ಬೆಳ್ತಂಗಡಿ, ಏ. 21: ಬೆಳ್ತಂಗಡಿ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ. ಆದಂ ಉಸ್ಮಾನ್ (65) ಅವರು ಅಲ್ಪಕಾಲದ ಅಸೌಖ್ಯದಿಂದ ಎ.20 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ. ಆದಂ ಉಸ್ಮಾನ್ ಅವರು ಪುತ್ತೂರು, ಕಡಬ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಹಲವು ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.