ಬೆಳ್ತಂಗಡಿ,ಮಾ. 17: ಆಟೋ ರಿಕ್ಷಾ ಡಿಕ್ಕಿಯಾಗಿ 3 ವರ್ಷದ ಮಗು ಮೃತಪಟ್ಟ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಎಂದು ಗುರುತಿಸಲಾಗಿದೆ.
ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದ ವೇಳೆ ಆಟೋರಿಕ್ಷಾ ಮಗುವಿಗೆ ತಾಗಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎನ್ನಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.