ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಆಡಳಿತ ಕಚೇರಿಯ ಸ್ವಂತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಮಂಗಳೂರಿನ ಪಂಪೈಲ್ ನಲ್ಲಿರುವ ಲೋಟಸ್ ಗ್ಯಾಲಕ್ಸಿಯಲ್ಲಿ ಜರಗಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಂತ ಕಟ್ಟಡದ ಆಡಳಿತ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬಳಿಕ ಮಾತಾಡಿ ಸಹಕಾರಿ ರಂಗದಿಂದ ಸಮಾಜದ ಸಬಲೀಕರಣ ಸಾಧ್ಯ. ಸಹಕಾರಿ ಎನ್ನುವುದು ಬಹಳ ಶ್ರೇಷ್ಠವಾದುದು. ಸಿಬ್ಬಂದಿ ವರ್ಗದವರ ಸಮರ್ಪಣಾ ಭಾವದ ಕರ್ತವ್ಯ ಸಂಸ್ಥೆಯ ಬೆಳವಣಿಗೆಗೆ ಕಾರಣವಾಗುತ್ತದೆ. ಸಂಸ್ಥೆಯಿಂದ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಂತಸದ ವಿಚಾರ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹೇಳಿದರು.
ಸಾದ್ವೀ ಶ್ರೀ ಮಾತಾನಂದಮಯೀರವರು ಆಶೀರ್ವಚನ ನೀಡಿ ಜನಹಿತ ಕಾರ್ಯಗಳು ಶ್ರೀಗಳ ಮಾರ್ಗದರ್ಶನದಿಂದ ನಡೆದಿದೆ. ಕಡಿಮೆ ಅವಧಿಯಲ್ಲಿ ಸಂಸ್ಥೆ ಶ್ರೇಯೋಭಿವೃದ್ಧಿಯನ್ನು ಕಂಡಿದೆ ಎಂದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರು ‘ಸಹಕಾರಿ ಸಿರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಸಹಕಾರಿ ಕ್ಷೇತ್ರ ವಿಕಸನ ಹೊಂದುತ್ತಿದೆ. ಸಹಕಾರಿ ಕ್ಷೇತ್ರ ಬೆಳೆದಿದೆ. ಸಹಕಾರಿಯನ್ನು ಬೆಳೆಸುವಲ್ಲಿ ಎಲ್ಲರ ಸಹಕಾರ ಅಗತ್ಯ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯೂ ಒಂದು ಮಾದರಿ ಸಹಕಾರಿಯಾಗಿದೆ ಎಂದರು.
ಕ್ಯಾಂಪ್ರೋ ಅಧ್ಯಕ್ಷ ಕಿಶೋರ್ ಕುಮಾರ್ ಕುಡಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ. ನಂಜನಗೌಡ, ಮಂಗಳೂರು ಕೆ.ಎಂ.ಎಫ್. ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮಂಗಳೂರು ಮಹನಗರಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಮಂಗಳೂರು ರೋಹನ್ ಕಾರ್ಪೊರೇಶ್ ನ ಆಡಳಿತ ನಿರ್ದೇಶಕ ರೋಹನ್ ಮಾಂತೆರೋ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ನಿರ್ದೇಶಕಿ ಭಾರತಿ ಜಿ. ಭಟ್ .ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ್, ಲೋಟಸ್ ಪ್ರಾಪರ್ಟೀಸ್ ನ ಪಾಲುದಾರ ಜಿತೇಂದ್ರ ಕೊಟ್ಟಾರಿ, ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಸಂದೀಪ್ ಗರೋಡಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಅನಿಲ್ ಲೋಬೊ, ದಿವಾಕರ ಶೆಟ್ಟಿ ಕಾಪು, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ದ ಅಧ್ಯಕ್ಷರಾದ ಎ. ಸುರೇಶ್ ರೈ ರವರನ್ನು ಗೌರವಿಸಲಾಯಿತು.