ಮಂಗಳೂರು ಜ. 11 : ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಬುಧವಾರ ಜಿಲ್ಲಾ ಕಾರಾ ಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ‘ಮನಪರಿವರ್ತನೆಗಾಗಿ ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜೈಲಿನಲ್ಲಿ ಖೈದಿಗಳೇ ವಿವಿಧ ರೀತಿಯ ಗಿಡ ಮರಗಳನ್ನು ಬೆಳೆಸಿ ಪೋಷಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕಾರಾಗೃಹ ಭದ್ರತಾ ಅಧಿಕಾರಿಗಳಾದ ಭರತ್ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.
1 Comment
Pingback: outdoor coffee shop ambience