ಮಂಗಳೂರು,ಸೆ.08 : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಸೆ.7ರಿಂದ 9 ರವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶನಿವಾರ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಣೇಶೋತ್ಸವದ ಸಂದರ್ಭ ತೆನೆ ವಿತರಣೆ ಮಾಡುವ ಕಾರ್ಯ ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ನಡೆಯುತ್ತಿದೆ. ನಮ್ಮ ಬದುಕು ಪ್ರಕೃತಿಯೊಂದಿಗೆ ಹೇಗೆ ಜೋಡಿಸಿಕೊಂಡಿದೆ ತಿಳಿಯಬೇಕಾದ ವಿಷಯವಾಗಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ನೇತೃತ್ವದಲ್ಲಿ ಆಯೋಜಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮವು ಸಮಾಜಮುಖಿ ಕಾರ್ಯ ಗಳಿಗೆ ಪ್ರೇರಣೆ ನೀಡಲಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಅಶ್ವಿನಿ ಮಣಿ ಮುಲ್ಲೈ ಮುಗಿಲನ್, ಡಾ. ಶೈಲಜಾ ಮೋಹನ ದೇವ ಆಳ್ವ ಹಾಗೂ ಜಯಂತಿ ಮೆನನ್ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ಕೋಶಾಧಿಕಾರಿ ಸಿಎ ರಾಮ ಮೋಹನ್ ರೈ, ರವಿರಾಜ್ಶೆಟ್ಟಿ ನಿಟ್ಟೆಗುತ್ತು, ಕೃಷ್ಣ ಪ್ರಸಾದ್ ರೈ, ಗಣೇಶೋತ್ಸವ ಸಮಿತಿಯ ಸಂಚಾಲಕರಾದ ದಿವಾಕರ ಸಾಮಾನಿ ಚೇಳಾರ್‌ಗುತ್ತು, ಅಶ್ವತ್ಥಾಮ ಹೆಗ್ಡೆ, ಮನೀಶ್ ರೈ, ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಮೋಹನ್ ದೇವ ಆಳ್ವ ಸಾಂಕೇತಿಕ ತೆನೆ ವಿತರಿಸಿದರು.