ಮಂಗಳೂರು, ಏ. 21 : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ.ಭರತ್ ವೈ ಶೆಟ್ಟಿ ಅವರು ಏ. 18, ಮಂಗಳವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಪ್ರತಿನಿಧಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ಡಾ. ಭರತ್ ಶೆಟ್ಟಿ ಅವರು ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ದೇವಸ್ಥಾನದಿಂದ ಕಾವೂರು ಮೈದಾನದವರೆಗೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರ ಪಾದೆಯಾತ್ರೆಯ ಜತೆ ಸಾಗಿ ಬಂದು ಸುಮಾರು 2.20ಕ್ಕೆ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ಮೇಯರ್ ಜಯಾನಂದ ಅಂಚನ್, ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್ರಾಜ್ ಕೃಷ್ಣಾಪುರ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಭರತ್ ಶೆಟ್ಟಿ ಅವರ ಪತ್ನಿ ಡಾ| ಅಸಾವರಿ ವೈ. ಶೆಟ್ಟಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಾಜೀವ್ ಕಾಂಚನ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮತ್ತಿತರರು ಉಪಸ್ಥಿತರಿದ್ದರು.