ಮಂಗಳೂರು, ಫೆ. 27 :ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್ ಕಾರ್ಪೊರೇಶನ್ ಸಹಯೋಗದಲ್ಲಿ ಮಾ.1ರಿಂದ 3ರವರೆಗೆ ಪಣಂಬೂರು ಬೀಚ್ನಲ್ಲಿ ಜಾನಪದ ಕಡಲೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ರಾಜೇಶ್ ಆಳ್ವ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾ.1ರಂದು ಸಂಜೆ 6:30ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಜಾನಪದ ಕಡಲೋತ್ಸವ ಉದ್ಘಾಟಿಸಲಿದ್ದಾರೆ .ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿವಿಧ ಪ್ರದರ್ಶನ ಉದ್ಘಾಟಿಸುವರು.ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ಇದೇ ವೇಳೆ ಜಾನಪದ ಕಡಲೋತ್ಸವ ಪ್ರಶಸ್ತಿ ಮತ್ತು 13ಮಂದಿ ಜಾನಪದ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಮಾ.2ರಂದು ಸಂಜೆ 5:30ರಿಂದ ವಿಚಾರ ಸಂಕೀರ್ಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ ಎಂದು ಹೇಳಿದ್ದಾರೆ