ಮಂಗಳೂರು, ಎ.15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಭಾನುವಾರ ರೋಡ್ ಶೋ ನಡೆಸಿದರು.
ದ. ಕ. ಹಾಗೂ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ರೋಡ್ ಶೋ ಮೂಲಕ ಮತಯಾಚನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನುಬಿಜೆಪಿಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಸ್ವಾಗತಿಸಿದರು.
ಪ್ರಧಾನಿ ಮೋದಿಯವರು ಕೈಯ್ಯಲ್ಲಿ ಕಮಲದ ಚಿಹ್ನೆಯನ್ನು ಹಿಡಿದು ರಸ್ತೆಯುದ್ದಕ್ಕೂ ಸೇರಿದ್ದ ಜನರತ್ತ ಕೈಬೀಸುತ್ತಾ ಸಾಗಿದರು. ದ.ಕ. ಜಿಲ್ಲೆಯ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ನರೇಂದ್ರ ಮೋದಿ ಅವರ ಜತೆಯಲ್ಲಿದ್ದರು.