Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    February 23, 2026

    Subscribe to Updates

    Get the latest creative news from FooBar about art, design and business.

    What's Hot

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    February 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಹಿಳೆಯರಿಗೆ ಸುರಕ್ಷಿತ, ಸುಭದ್ರ, ಸಮೃದ್ಧಿದಾಯಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್ : ಜಯಂತಿ ಪೂಜಾರಿ
    Local News

    ಮಹಿಳೆಯರಿಗೆ ಸುರಕ್ಷಿತ, ಸುಭದ್ರ, ಸಮೃದ್ಧಿದಾಯಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್ : ಜಯಂತಿ ಪೂಜಾರಿ

    adminBy adminMay 7, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಂಟ್ವಾಳ ಮೇ. 07 : ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಘೋಷಿಸಿದೆ. ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಗೆ ಭರ್ಜರಿ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗುವಂತೆ ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಕಾಂಗ್ರೆಸ್ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದೆ. ಬೆಲೆ ಏರಿಕೆ ಗಗನಕ್ಕೇರಿರುವ ಇಂತಹ ಸಂದರ್ಭದಲ್ಲಿ ಮನೆ ನಿರ್ವಹಿಸಲು ಮಹಿಳೆಯರಿಗೆ ಅನುಕೂಲವಾಗುವಂತಹ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಈ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂಬುದಾಗಿ ನಮ್ಮ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

    ಮನೆ ಯಜಮಾನಿಗೆ ತಿಂಗಳಿಗೆ ರೂ. 2,000, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಪದವೀಧರ ನಿರುದ್ಯೋಗಿಗಳಿಗೆ ಯುವನಿಧಿ, ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇವು ಕಾಂಗ್ರೆಸ್ ಗ್ಯಾರಂಟಿಗಳಾಗಿವೆ. ಇನ್ನುಳಿದಂತೆ, ವಿಧವಾ ಪಿಂಚಣಿ 2,500ಕ್ಕೆ ಹೆಚ್ಚಳ, ದುಡಿಯುವ ಮಹಿಳೆಯರಿಗೆ 100 ಹಾಸ್ಟೆಲ್ ಗಳ ನಿರ್ಮಾಣ, ಕೈಗಾರಿಕಾ ಪಾರ್ಕ್‍ಗಳಲ್ಲಿ ಶೇ.20ರಷ್ಟು ನಿವೇಶನ ಮಹಿಳಾ ಉದ್ಯಮಿಗಳಿಗೆ ಮೀಸಲು, 5 ಸಾವಿರ ಸ್ತ್ರೀಶಕ್ತಿ ಕಿರು ಉದ್ಯಮಕ್ಕೆ ಸಹಕಾರ, ಹೈಸ್ಕೂಲ್, ಪಿಯುಸಿಗಳಲ್ಲಿ ವಿಧ್ಯಾಭ್ಯಾಸ ಕೈಬಿಟ್ಟ ಮಹಿಳೆಯರಿಗೆ ಆರ್ ಟಿಒಗಳಲ್ಲಿ ಉಚಿತ ವಾಹನ ಚಾಲನೆ ತರಬೇತಿ ಹಾಗೂ ಅವರಿಗೆ ಸಬ್ಸಿಡಿಯಲ್ಲಿ ಆಟೊರಿಕ್ಷಾ, ಕಾರು ನೀಡುವ ಭರವಸೆಗಳನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಲಾಗಿದೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೂ ಹಲವಾರು ವಿಶೇಷ ಸೌಲಭ್ಯಗಳನ್ನು ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.

    ಈ ಎಲ್ಲಾ ಭರವಸೆಗಳು ಈಡೇರಬೇಕಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ, ನಮ್ಮ ಕ್ಷೇತ್ರದ ಅಭ್ಯರ್ಥಿ ಬಿ.ರಮಾನಾಥ ರೈಯವರೂ ಗೆಲ್ಲಬೇಕು. ರೈಯವರು ಅತ್ಯಂತ ಪಾರದರ್ಶಕ, ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದವರು. ಬಂಟ್ವಾಳದ ಸಮಗ್ರ ಅಭಿವೃದ್ಧಿ ರೈಯವರಿಂದ ಈಗಾಗಲೇ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಇನ್ನಷ್ಟು ಅಭಿವೃದ್ಧಿ ಹೊಂದಲು, ಕ್ಷೇತ್ರದ ಜನತೆಯ ಜೀವನ ಗುಣಮಟ್ಟ ಸುಧಾರಿಸಲು ಚುನಾವಣೆಯಲ್ಲಿ ಮತ್ತೊಮ್ಮೆ ಅವರನ್ನು ಗೆಲ್ಲಿಸೋಣ ಎಂದು ಅವರು ವಿನಂತಿಸಿದರು.

    ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ಮೋರಸ್, ಪುರಸಭಾ ಮಾಜಿ ಅಧ್ಯಕ್ಷೆ ಜೋಸ್ಪಿನ್ ಡಿಸೋಜ, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಪುರಸಭಾ ಮಾಜಿ ಸದಸ್ಯರುಗಳಾದ ಧನವಂತಿ, ವಲರಿ, ಸಂಘಟನಾ ಕಾರ್ಯದರ್ಶಿ ಫೌಝಿಯಾ, ಡಿಸಿಸಿ ಸದಸ್ಯೆ ಫ್ಲೋಸಿ ಡಿಸೋಜ, ಪಾಣೆಮಂಗಳೂರು ಬ್ಲಾಕ್ ಸದಸ್ಯೆ ಶೋಭಾ ಶೆಟ್ಟಿ, ಬಂಟ್ವಾಳ ಬ್ಲಾಕ್ ಸದಸ್ಯೆ ಶಭಾನ ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 25, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    Local News February 24, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    Film News February 22, 2026

    ಫೆ.27: ಬಿರ್ದ್ ದ ಕಂಬುಲ“ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    Local News February 20, 2026

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    Local News February 20, 2026

    ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’

    Local News February 19, 2026

    ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ ಅಟ್ಲಾಂಟಾದಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ

    Comments are closed.

    Demo
    Don't Miss
    Local News February 25, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು,ಫೆ.25 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಸುಮಾರು 17 ಲಕ್ಷ ವೆಚ್ಚದ ಅಂಗನವಾಡಿ…

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    February 23, 2026

    ಫೆ.27: ಬಿರ್ದ್ ದ ಕಂಬುಲ“ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    February 22, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.