ಮಾಣಿ, ಏ 29 : ಕೆಎಸ್ಸಾರ್ಟಿಸಿ ಬಸ್ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಕ್ರಂಪಾಡಿ ಬಳಿ ನಡೆದಿದೆ. ಮೃತ ರನ್ನು ಜೈಸನ್ (30)ಎಂದು ಗುರುತಿಸಲಾಗಿದೆ.
ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಆಟೋ ರಿಕ್ಷಾ ನಡುವೆ ನಸುಕಿನ ಜಾವ ಢಿಕ್ಕಿ ಸಂಭವಿಸಿ, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಜೈಸನ್ ಅವರನ್ನು ಹೊರತೆಗೆದಿದ್ದಾರೆ. ಈ ವೇಳೆಗಾಗಲೇ ಜೈಸನ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.