ಮೂಡುಬಿದಿರೆ, ಏ 21 : ಮೂಲ್ಕಿ- ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಅವರು ಪಕ್ಷದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಏ. 17 ,ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪಿನಲ್ಲಿ ಸಾಗಿ ಬಂದರು. ಬಳಿಕ ಚುನಾವಣೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಎಂಎಲ್ಸಿ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ಶಾಲೆಟ್ ಪಿಂಟೊ, ದೇವಿಪ್ರಸಾದ್ ಶೆಟ್ಟಿ, ಮಮತ ಗಟ್ಟಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೆರ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕಾನ್ ಬಂಟ್ವಾಳ್, ಸುಪ್ರಿಯಾ ಡಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.