ಬೆಂಗಳೂರು, ಫೆ. 02 : ರೈಲಿನಲ್ಲಿ ರಾತ್ರಿ ವೇಳೆ ಪ್ರಯಾಣ ಮಾಡುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆ ಹಲವಾರು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದೆ.
ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರ ಮೊಬೈಲ್ ಸೌಂಡ್ ಜಾಸ್ತಿ ಮಾಡಿದರೆ, ಅನಾವಶ್ಯಕವಾಗಿ ರೈಲಿನಲ್ಲಿ ಲೈಟ್ಸ್ ಆನ್ ಮಾಡಿದರೆ, ಜೋರಾಗಿ ಮಾತನಾಡಿದರೆ.. ಅಂಥವರ ವಿರುದ್ಧ ರೈಲ್ವೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸುರಕ್ಷಿತ ಹಾಗೂ ನೆಮ್ಮದಿಯ ಪ್ರಯಾಣಕ್ಕೆ ನೈರುತ್ಯ ರೈಲ್ವೆ ವಲಯ ಬೆಂಗಳೂರು ವಿಭಾಗವು ಹಲವು ಕ್ರಮ ಕೈಗೊಂಡಿದೆ.