ಬೆಂಗಳೂರು, ಸೆ.17 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೊಲೆ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್‌ಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮಂಗಳವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ಟೆಕ್ನಿಕಲ್ ಸಾಕ್ಷ್ಯಗಳನ್ನು ಹಾರ್ಡ್ ಡಿಸ್ಕ್‌ನಲ್ಲಿ ಸಲ್ಲಿಸಿದರು.
ಅಂತಾ ದರ್ಶನ್ ಪರ ವಕೀಲರು, ದರ್ಶನ್‌ಗೆ ಬ್ಯಾಕ್‌ಪೇನ್ ಇದೆ. ಚೇರ್ ಕೊಡುವಂತೆ ಕೇಳಿದ್ದು, ಚೇರ್ ಕೊಟ್ಟಿಲ್ಲ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೇ ಅವರ ಕುಟುಂಬ, ಸ್ನೇಹಿತರ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ನ್ಯಾಯಾಧೀಶರು ದೂರಿದರು.