ಬೆಂಗಳೂರು, ನ. 18 : ಬಿಜೆಪಿ ಪಕ್ಷದಿಂದ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ .ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ಹೋಟೆಲ್ ಐಟಿಸಿ ಗಾರ್ಡೇನಿಯಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್. ಅಶೋಕ್ ಅವರ ಹೆಸರನ್ನು ಸೂಚಿಸಿದರು. ಸುನೀಲ್ ಕುಮಾರ್ ಅದನ್ನು ಅನುಮೋದಿಸಿದರು. ಅದನ್ನು ಉಳಿದವರು ಅದಕ್ಕೆ ಸಹಮತ ವ್ಯಕ್ತಪಡಿಸಿದರು. ಸಭೆಗೂ ಮುನ್ನ ಪಕ್ಷದ ವರಿಷ್ಠರು, ವೀಕ್ಷಕರು ಶಾಸಕರ ಅಭಿಪ್ರಾಯವನ್ನು ಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ರಾಜಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ವೀಕ್ಷಕರಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ದುಷ್ಯಂತ ಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮತ್ತಿತರರು ವೇದಿಕೆಯಲ್ಲಿದ್ದರು.