ಮಹಾನಗರ,ಅ, 17: ನಗರದ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10,ಶನಿವಾರ ನಡೆಯಿತು.ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಸ್ವೀಕರಿಸಿ ಮಾತನಾಡಿದ ನಿವೃತ್ತ ಮೇಜರ್ ಜನರಲ್ ಸತೀಶ್ ಭಂಡಾರಿ ಅವರು, ಸೇನಾ ಸಾಧನಗಳ ತಯಾರಿಯ ಸಂಶೋ ಧನೆ ಮತ್ತು ಅಭಿವೃದ್ಧಿಯ 40ರಷ್ಟು ಹಾಗೂ ಉತ್ಪಾದಿಸುವ ಸುಮಾರು 30 ಕಂಪೆನಿಗಳು ನಮ್ಮಲ್ಲಿವೆ, ಹಾಗಾಗಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದರು.
ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತ ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರನ್ನು ಪ್ರತಿಷ್ಠಾನದ ವತಿ ಯಿಂದ ಸ ನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಶೆಟ್ಟಿ ಅವರು, ನಾನು ಅದೃಷ್ಟವಂತ ಎಂದು ಕೆಲವರು ಹೇಳುತ್ತಾರೆ. ನನ್ನ ಅದೃಷ್ಟದಿಂದ ನನ್ನ ಉದ್ಯಮ ಎತ್ತರಕ್ಕೆ ಬೆಳೆದಿದೆ . ಅಲ್ಲದೆ ಬಂಟ ಸಮಾಜದ ಹಿರಿಯರ ಸಾಧನೆಯಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಪ್ರಕಾಶ್ ಶೆಟ್ಟಿ ಹೇಳಿದರು.
ಯಕ್ಷಗಾನ ರಂಗದಲ್ಲಿ 55 ವರ್ಷ ಮಿಕ್ಕಿ ಸೇವೆ ಸಲ್ಲಿಸಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ದಿ ಡಿ.ಕೆ. ಚೌಟ ದತ್ತಿನಿಧಿಯಿಂದ, 25 ಸಾವಿರ ರೂ. ನಗದು, ಫಲಕ ನೀಡಿ ಗೌರವಿಸಲಾಯಿತು.ಕೃಷಿ ಕ್ಷೇತ್ರದ ಸಾಧನೆಗಾಗಿ ಪುಷ್ಪ ಶೆಟ್ಟಿ ಅವರಿಗೆ ದಿ ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಮನೀಶ್ ಶೆಟ್ಟಿ ಅವರಿಗೆ ಸಿಎ ವೈ. ಆರ್. ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ರೋಶನ್ ಶೆಟ್ಟಿ ಅವರಿಗೆ ಸಿಎ ಗೋಪಾಲ್ .ಬಿ. ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಯಿತು.
ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಕುಶಲ್ ಎಸ್.ಹೆಗ್ಡೆ, ಕೆ.ಎಸ್. ಹೆಗ್ಡೆ, ಯೋಜನ ನಿರ್ದೇಶಕ ಡಾ| ಬಿ. ಸಂಜೀವ ರೈ, ಖಜಾಂಚಿ ಸಿಎ ಸುದೇಶ್ ಕುಮಾರ್ ರೈ, ಪ್ರೊ.ಆರ್. ರೈ, ಪಳ್ಳಿ ಕಿಶನ್ ಹೆಗ್ಡೆ, ಭಾಸ್ಕರ ಕುಕ್ಕುವಳ್ಳಿ, ಜ್ಯೋತಿ ಪ್ರಸಾದ್ ಹೆಗ್ಡೆ, ಜೈರಾಜ್ ಬಿ. ರೈ, ಆರ್ತಿ ಶೆಟ್ಟಿ ಉಪಸ್ಥಿತರಿದ್ದರು. ಕಳ್ಳಿಗೆ ತಾರಾನಾಥ ಶೆಟ್ಟಿ ನಿರೂಪಿಸಿದರು.