ಮಂಗಳೂರು, ಫೆ. 17: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದದಲ್ಲಿ ಮಂಗಳೂರು ರಥೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರಗಿತು.
ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕವು ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿ ಯವರ ದಿವ್ಯ ಹಸ್ತಗಳಿಂದ ನೆರವೇರಿತು. ಯಜ್ಞಮಂಟಪದಲ್ಲಿ ಮಹಾಯಜ್ಞ, ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.