ಸಂಪಾಜೆ, ಡಿ. 3 : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಶನಿವಾರ ನಡೆದಿದೆ.
ಮೃತರನ್ನು ಸಂಪಾಜೆ ಗ್ರಾಮದ ಎಡ್ವಾಣೆ ತಿಮ್ಮಪ್ಪ ಪೂಜಾರಿ (65) ಎಂದು ಗುರುತಿಸಲಾಗಿದೆ.
ತಿಮ್ಮಪ್ಪ ಪೂಜಾರಿ ಅವರು ತಮ್ಮ ಮನೆಗೆ ನಡೆದುಕೊಂಡು ಹೋಗುವ ದಾರಿಯ ಮದ್ಯೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.