ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಸಿಂಗಾಪುರ ಸರ್ಕಾರ ಜನರಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಿದೆ.
ಒಂದೇ ವಾರದಲ್ಲಿ 26 ಸಾವಿರ ಜನರಿಗೆ ಕೋವಿಡ್ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಖ್ಯೆ ವಾರದಿಂದ ವಾರಕ್ಕೆ ದುಪ್ಪಟ್ಟಾಗುತ್ತಿದೆ. ಒಂದೇ ವಾರದಲ್ಲಿ ಶೇಕಡಾ 90ರಷ್ಟು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಕಂಡಿದೆ.
ಕೊರೊನಾ ಸೋಂಕು ಏರಿಕೆ ಕಂಡ ಹಿನ್ನೆಲೆ ಸಿಂಗಾಪುರದ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗುತ್ತಿದೆ. ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ಮುಂದೂಡುವಂತೆ ಹಾಗೂ ಸೂಕ್ತ ರೋಗಿಗಳನ್ನು ಮನೆಗೆ ವಾಪಾಸ್ಸು ಕಳುಹಿಸಿ ಸಂಚಾರಿ ಚಿಕಿತ್ಸಾಲಯದ ಸೇವೆ ಮುಂದುವರಿಸುವಂತೆ ಆರೋಗ್ಯ ಸಚಿವಾಲಯ ತಿಳಿಸಿದೆ.
ನಾವು ಮತ್ತೊಂದು ಕೋವಿಡ್ ಅಲೆಯ ಆರಂಭದಲ್ಲಿದ್ದೆವೆ. ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಮುಂದಿನ 2 ರಿಂದ 4 ವಾರಗಳಲ್ಲಿ, ಅಂದರೆ ಜೂನ್ ಅಂತ್ಯದ ವೇಳೆಗೆ ಅಲೆ ಗರಿಷ್ಟ ಮಟ್ಟ ತಲುಪಲಿದೆ ಆರೋಗ್ಯ ಇಲಾಖೆ ಸಚಿವ ಓಂಗ್ ಯೆ ಕುಂಗ್ ಅವರು ಮಾಹಿತಿ ನೀಡಿದ್ದಾರೆ.