ಸುರತ್ಕಲ್, ಜು. 5 : ವಿದ್ಯುತ್ ತಂತಿ ತುಳಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.
ಮೃತ ಪಟ್ಟ ಯುವಕನನ್ನು ಸ್ಥಳೀಯ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ.
ಮಂಗಳವಾರ ತಡರಾತ್ರಿ ಭಾರಿ ಗಾಳಿ ಮಳೆಗೆ ವಿದ್ಯುತ್ ತಂತಿ ಕಡಿದು ಬಿದಿದ್ದು, ಈ ಬಗ್ಗೆ ಅರಿವಿಲ್ಲದೇ ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಭಾರಿ ಗಾಳಿ ಮಳೆಗೆ ವಿವಿಧೆಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
1 Comment
Pingback: site web