ಸುರತ್ಕಲ್, ಆಗಸ್ಟ್ 28 : ಮಂಗಳೂರು ಉತ್ತರ ವಿಧನಾ ಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ “ಸೋಣ ಸೌಹಾರ್ದ ಕೆಸರ್ ದ ಪರ್ಬ”ವು ಭಾನುವಾರ ಮುಚ್ಚೂರು ಕೊಡಿಪಾಡಿಯ ಬ್ರಹ್ಮ ಬೈದರ್ಕಳ ಗರೋಡಿ ಮುಂಭಾಗದ ಗದ್ದೆಯಲ್ಲಿ ಆ.25, ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊಬೈಲ್ ಸಾಮಾಜಿಕ ಜಾಲತಾಣಗಳಲ್ಲೇ ತಲ್ಲೀನರಾಗಿರುವ ಯುವಜನರಲ್ಲಿ ತುಳುನಾಡಿದ ಸಂಸ್ಕೃತಿಯನ್ನು ಪರಿಚಯಿಸುವ ಜೊತೆಗೆ ಮುಂದಿನ ಪೀಳಿಗೆಗೂ ಉಳಿಸುವ ಕೆಲಸ ಇಂದಿನ ಸೋಣ ಸೌಹಾರ್ದ ಕೆಸರ್ ದ ಪರ್ಬ ದಿಂದ ಆಗಿದೆ. ಈ ಸೌಹಾರ್ದ ಕಾರ್ಯಕ್ರಮವನ್ನು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮುಂದಿನ ದಿನಗಳಲ್ಲೂ ಆಯೋಜಿಸಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಬ್ರಹ್ಮ ಬೈದರ್ಕಳ ಗರೋಡಿಯ ಜಗನ್ನಾಥ ಅತ್ತಾರ್, ಡಾ. ಗುತ್ತಿನಾರ್ ರವಿರಾಜ್ ಶೆಟ್ಟಿ ತುಳುನಾಡಿನ ಸಂಸ್ಕೃತಿಯ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಸುರತ್ಕಲ್ ಕಿಸಾನ್ ಘಟಕದ ಅಧ್ಯಕ್ಷ ರಾಜೇಶ್ ಶೆಟ್ಟಿ ಪಡ್ರೆ, ಮಹಾಬಲ ಪೂಜಾರಿ ಕಡಂಬೋಡಿ, ಪ್ರತಾಪ್ ಚಂದ್ರ ಶೆಟ್ಟಿ, ಪ್ರತಿಭಾ ಕುಳಾಯಿ, ಎಂ.ಜಿ. ಹೆಗ್ಡೆ, ಶಾಲೆಟ್ ಪಿಂಟೊ, ದೀಪಕ್ ಪೂಜಾರಿ ಪೆರ್ಮುದೆ ಮೊದಲಾದವರು ಉಪಸ್ಥಿತರಿದ್ದರು.