ಸುರಪುರ, ಫೆ. 26: ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಫೆ. 25 ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ರಾಜಾ ವೆಂಕಟಪಟ್ಟ ನಾಯಕ ಅವರು ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.